Close Menu
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
What's Hot

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026
Facebook X (Twitter) Instagram
Facebook X (Twitter) Instagram
ಜಗಲಿ ಕಟ್ಟೆ
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
ಜಗಲಿ ಕಟ್ಟೆ
Home»ಸಿನಿಮಾ»ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʻನಾಯಿ ಇದೆ ಎಚ್ಚರಿಕೆʼ ಚಿತ್ರ ನವೆಂಬರ್ 28ಕ್ಕೆ ತೆರೆಗೆ
ಸಿನಿಮಾ

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʻನಾಯಿ ಇದೆ ಎಚ್ಚರಿಕೆʼ ಚಿತ್ರ ನವೆಂಬರ್ 28ಕ್ಕೆ ತೆರೆಗೆ

Jagali KatteBy Jagali KatteNovember 25, 20251 Comment2 Mins Read
WhatsApp Facebook Twitter LinkedIn Email Copy Link
ನಾಯಿ ಇದೆ ಎಚ್ಚರಿಕೆ ಸಿನಿಮಾದಲ್ಲಿ ನಾಯಕ ಲೀಲಾಮೋಹನ್
Share
Facebook Twitter LinkedIn Pinterest Email

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆ ಏಕೆ? ಎಂಬುದನ್ನು ಸಿನಿಮಾದಲ್ಲೇ ನೋಡಬೇಕು. ಲಾವಣ್ಯ ಗದೆ ಅವರು ನಿರ್ಮಾಣ ಮಾಡಿರುವ ಈ ಚಿತ್ರದ ನಾಯಕನಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಲೀಲಾಮೋಹನ್ ಪಿವಿಆರ್ ಅಭಿನಯಿಸಿದ್ದಾರೆ. ಕಲಿಗೌಡ ನಿರ್ದೇಶಿಸಿದ್ದಾರೆ. 

“ನನಗೂ ಚಿತ್ರರಂಗಕ್ಕೂ ಹದಿನೈದು ವರ್ಷಗಳ ನಂಟು. ಈ ಹಿಂದೆ “ತನಿಖೆ” ಎಂಬ ಚಿತ್ರ ನಿರ್ದೇಶನ ಮಾಡಿದ್ದ ನನಗೆ ಇದು ಎರಡನೇ ನಿರ್ದೇಶನದ ಚಿತ್ರ. ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ನಾಯಿ ಇದೆ ಎಚ್ಚರಿಕೆ” ಚಿತ್ರ ಶೀರ್ಷಿಕೆಯಲ್ಲಿ ಎಷ್ಟು ಕುತೂಹಲ ಮೂಡಿಸಿದೆಯೋ, ಅಷ್ಟೇ ಕುತೂಹಲ ಸಿನಿಮಾದಲ್ಲೂ ಇರುತ್ತದೆ. ಯಾರು ಊಹಿಸದ ರೋಚಕ ಸನ್ನಿವೇಶಗಳು ಈ ಚಿತ್ರದ ಹೈಲೆಟ್. ನಾಯಿ ನಿಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನಿಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆʼ ಎಂದರು.

ಇದನ್ನೂ ಓದಿ: ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೇಲರ್ ಬಿಡುಗಡೆ

ಮುಂದುವರಿದು ಮಾತನಾಡಿ, “ಟೀಸರ್, ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಜನರ ಮನ ಗೆದ್ದಿದೆ. ಚಿತ್ರ ಕೂಡ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವ ಭರವಸೆ ಇದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನವೆಂಬರ್ 28 ರಂದು ನಿಮ್ಮ ಮುಂದೆ ಬರಲಿದೆ. ಚಿತ್ರ ನೋಡಿ, ಪ್ರೋತ್ಸಾಹ ನೀಡಿ ನಿರ್ದೇಶಕ ಕಲಿ ಗೌಡ ಎಂದರು. 

ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತ ಕಥೆ

ನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ.. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ ಕೂಡ ಹೌದು. ಇದರ ಜೊತೆಗೆ ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಜೊಂಬಿ (zombie) ಚಿತ್ರ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕ ಲೀಲಾಮೋಹನ್ ತಿಳಿಸಿದರು.

ಇದನ್ನೂ ಓದಿ: ಸೃಜನ್ ಲೋಕೇಶ್ ನಿರ್ದೇಶನದ ಬಹು ನಿರೀಕ್ಷಿತ GST ಚಿತ್ರ ನವೆಂಬರ್ 28ರಂದು ತೆರೆಗೆ

ಪಾತ್ರವರ್ಗ ಮತ್ತು ತಾಂತ್ರಿಕ ಬಳಗ

ಡಾ. ಲೀಲಾಮೋಹನ್ ಪಿವಿಆರ್, ಪ್ರಮೋದ್ ಶೆಟ್ಟಿ, ಬಲ ರಾಜ್ ವಾಡಿ,  ದಿವ್ಯಶ್ರೀ, ಮಾನಸ ಗೌಡ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಜಗಪ್ಪ, ಅನಿರುದ್ಧ್ ಮಹೇಶ್, ಪ್ರಬಿಕ್ ಮೊಗವೀರ್, ಚಂದನ, ರಿಷಿ, ಸೀನು ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಉತ್ತರ ಕರ್ನಾಟಕದ ಪ್ರತಿಭೆ ಯುವ ಗಂಗಾಧರ್ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ‌ ಕಾಣಿಸಿಕೊಂಡಿದ್ದಾರೆ. ಕೆಲವು ಕಿರುಚಿತ್ರಗಳು ಹಾಗೂ ಶ್ರೀರಸ್ತು ಶುಭಮಸ್ತು, ನನ್ನರಸಿ ರಾಧೆ ಸೇರಿದಂತೆ ಅನೇಕ ಧಾರಾವಾಹಿಗಳ ಮೂಲಕ ಯುವ ಗಂಗಾಧರ್ ಜನಪ್ರಿಯರಾಗಿದ್ದಾರೆ. ಎ.ಜೆ.ಕುಮಾರ್ ಛಾಯಾಗ್ರಹಣ ಹಾಗೂ ರವೀಶ್ ಆತ್ಮರಾಮ್ ಅವರ ಸಂಕಲನ ಈ ಚಿತ್ರಕ್ಕಿದೆ.

Kannada News nayi ide eccharike kannada movie nayi ide eccharike movie nayi ide eccharike news Sandalwood ಕನ್ನಡ ಸಿನಿಮಾ ಸುದ್ದಿ ನಾಯಿ ಇದೆ ಎಚ್ಚರಿಕೆ ಸ್ಯಾಂಡಲ್‌ವುಡ್‌
Share. Facebook Twitter Pinterest LinkedIn Tumblr Email
Jagali Katte
  • Website

Related Posts

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026

‘ಕರಾವಳಿ’ಯಿಂದ ಬಂತು ಫಸ್ಟ್ ರೊಮ್ಯಾಂಟಿಕ್ ಮುದ್ದು ಗುಮ್ಮ

January 23, 2026
View 1 Comment

1 Comment

  1. Pingback: ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ ʻಪಾಠಶಾಲಾʼ – Jagalikatte

Leave A Reply Cancel Reply

Editors Picks
Latest Posts

Subscribe to Updates

Get the latest sports news from SportsSite about soccer, football and tennis.

© 2026 Jagali Katte. Designed by Karnataka Best Digital Services.
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ

Type above and press Enter to search. Press Esc to cancel.