Close Menu
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
What's Hot

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026
Facebook X (Twitter) Instagram
Facebook X (Twitter) Instagram
ಜಗಲಿ ಕಟ್ಟೆ
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ
ಜಗಲಿ ಕಟ್ಟೆ
Home»ಮುಖಪುಟ»45 Trailer: ತಾಂತ್ರಿಕವಾಗಿ ಬಲು ಗಟ್ಟಿಯಾಗಿದೆ ʻ45ʼ ಸಿನಿಮಾ! ಚೊಚ್ಚಲ ಚಿತ್ರದಲ್ಲಿ ಅರ್ಜುನ್‌ ಜನ್ಯ ಕಮಾಲ್‌
ಮುಖಪುಟ

45 Trailer: ತಾಂತ್ರಿಕವಾಗಿ ಬಲು ಗಟ್ಟಿಯಾಗಿದೆ ʻ45ʼ ಸಿನಿಮಾ! ಚೊಚ್ಚಲ ಚಿತ್ರದಲ್ಲಿ ಅರ್ಜುನ್‌ ಜನ್ಯ ಕಮಾಲ್‌

Jagali KatteBy Jagali KatteDecember 16, 2025No Comments3 Mins Read
WhatsApp Facebook Twitter LinkedIn Email Copy Link
45 ಸಿನಿಮಾದ ಟ್ರೇಲರ್‌ ಬಿಡುಗಡೆ
Share
Facebook Twitter LinkedIn Pinterest Email

ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ʻ45ʼ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದಕ್ಕೂ ಮೊದಲು ಇದೇ ಚಿತ್ರದ ಬಹುನಿರೀಕ್ಷಿತ ಟ್ರೇಲರ್‌ ರಿಲೀಸ್‌ ಆಗಿ ಕುತೂಹಲಕ್ಕೆ ಒಗ್ಗರಣೆ ಹಾಕಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಈ ಸಿನಿಮಾವನ್ನು ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿದ್ದಾರೆ. ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಇದೇ ಡಿಸೆಂಬರ್‌ 25 ರಂದು ರಿಲೀಸ್‌ ಆಗಲಿದೆ.


ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ, ಬೆಂಗಳೂರು ನಗರದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ಚಿತ್ರದ ಟ್ರೇಲರ್ ಅನಾವರಣವಾಗಿದ್ದು ವಿಶೇಷ. ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಸುಧಾರಾಣಿ, ಪ್ರಮೋದ್ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಒಬ್ಬೊಬ್ಬರೇ ಮಾತನಾಡಿದರು.

ಇದನ್ನೂ ಓದಿ: ʻಮಹಾಕವಿʼ ಸಿನಿಮಾ ಶೂಟಿಂಗ್‌ ಮುಕ್ತಾಯ; ಇದು ಬರಗೂರು ರಾಮಚಂದ್ರಪ್ಪರ 25ನೇ ಚಿತ್ರ

ಅರ್ಜುನ್‌ ಜನ್ಯ ಮೊದಲ ಮಾತು
ʻನಾನು ಮೂರು ಜನ ನಾಯಕರ ಅಭಿಮಾನಿಯಾಗಿ ಈ ಸಿನಿಮಾ ನಿರ್ದೇಶನ ಮಾಡಿದ್ದೇನೆ. ಹಾಗಾಗಿ ನನಗೆ ಈ ಸಿನಿಮಾ ನಿರ್ದೇಶಿಸುವುದು ಅಷ್ಟು ಕಷ್ಟ ಆಗಲಿಲ್ಲ. ನಾನು ಸಿನಿಮಾ ನಿರ್ದೇಶಕನಾಗಲು ಶಿವರಾಜಕುಮಾರ್ ಅವರೇ ಕಾರಣ. ಇನ್ನೂ, ಈ ಚಿತ್ರದ ನಾಲ್ಕನೇ ಹೀರೋ ನಿರ್ಮಾಪಕ ರಮೇಶ್ ರೆಡ್ಡಿ. ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾ ಮಾಡಿದ್ದಾರೆ. ನಾನು ಚಿತ್ರ ನಿರ್ದೇಶನಕ್ಕೂ ಮುನ್ನ ಅನಿಮೇಶನ್ ನಲ್ಲಿ ಈ ಸಿನಿಮಾ ಕಥೆ ಮಾಡಿ ಶಿವಣ್ಣ ಹಾಗೂ ರಮೇಶ್ ರೆಡ್ಡಿ ಅವರಿಗೆ ತೋರಿಸಿದ್ದೆ. ಅವರು ಅದನ್ನು ನೋಡಿ ಮೆಚ್ಚಿಕೊಂಡಿದ್ದರುʼ ಎಂದರು.
ಮುಂದುವರಿದು ಮಾತನಾಡಿ, ʻನಮ್ಮ ಹಿರಿಯರು ನಮಗೆ ತಿಳಿಸಿಕೊಟ್ಟಿರುವ ಅನೇಕ ಸಂಸ್ಕೃತಿಯನ್ನು ನಾವು ಮರೆತಿದ್ದೇವೆ. ಆ ವಿಷಯದ ಒಂದೆಳೆ ಇಟ್ಟುಕೊಂಡು ಈ ಸಿನಿಮಾ ಕಥೆ ಮಾಡಿದ್ದೇನೆ.‌ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಡಿಸೆಂಬರ್ 25ರಂದು ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಿʼ ಎಂದರು.

ಇದನ್ನೂ ಓದಿ:  ʻಡೆವಿಲ್‌ʼ ಜಾತ್ರೆಯಲ್ಲಿ ಉತ್ಸವ ಮೂರ್ತಿಗಷ್ಟೇ ಸಿಂಗಾರ ಸಾಕಾ? ʻದಿ ಡೆವಿಲ್‌ʼ ಸಿನಿಮಾ ವಿಮರ್ಶೆ

ಶಿವಣ್ಣ ಹೇಳಿದ್ದೇನು?
ಟ್ರೇಲರ್ ಚೆನ್ನಾಗಿ ಮೂಡಿಬಂದಿದೆ ಎಂದು ಮಾತನಾಡಿದ ನಟ ಶಿವರಾಜಕುಮಾರ್, ʻಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಸುಧಾರಾಣಿ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದಾರೆ. ರಮೇಶ್ ರೆಡ್ಡಿ ಅವರ ನಿರ್ಮಾಣದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಅಷ್ಟು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಾನು ಮೊದಲು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಈ ಚಿತ್ರ ಬಿಡುಗಡೆ ಆದ ಮೇಲೆ ಅರ್ಜುನ್ ಜನ್ಯ ಎಲ್ಲಿಗೊ ಹೋಗುತ್ತಾರೆ‌ʼ ಎಂದರು.


ಈ ಸಿನಿಮಾದಲ್ಲಿ ತೆರೆಯ ಮೇಲೆ ಮೂರು ಸ್ಟಾರ್ ಗಳು ಕಾಣಿಸಿದ್ದೇವೆ. ಅದರೆ ತೆರೆಯ ಹಿಂದೆ ಮೂರು ಸ್ಟಾರ್ ಗಳು‌ ಇದ್ದಾರೆ. ಮೊದಲ ಸ್ಟಾರ್ ನಿರ್ಮಾಪಕ ರಮೇಶ್ ರೆಡ್ಡಿ. ಅವರು ದುಡಿದಿದ್ದನ್ನೆಲ್ಲಾ ಈ ಚಿತ್ರಕ್ಕೆ ಸುರಿದಿದ್ದಾರೆ. ಎರಡನೇ ಸ್ಟಾರ್ ನಿರ್ದೇಶಕ ಅರ್ಜುನ್ ಜನ್ಯ ಎರಡು ವರ್ಷದಿಂದ ಶ್ರಮ ಹಾಕಿದ್ದಾರೆ. ಮೂರನೇ ಸ್ಟಾರ್ ಛಾಯಾಗ್ರಾಹಕ ಸತ್ಯ ಹೆಗಡೆ. ಇನ್ನೂ, ಇಪ್ಪತ್ತರ ಯುವಕನನ್ನು ನಾಚಿಸುವ ಉತ್ಸಾಹವಿರುವ ಶಿವಣ್ಣ ಹಾಗು “ಸು ಫ್ರಮ್ ಸೋ” ಚಿತ್ರದ ಮೂಲಕ ಬಹುಬೇಡಿಕೆಯ ನಟರಾಗಿರುವ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದರು ನಟ ಉಪೇಂದ್ರ.


ನಾನು ಈ ಚಿತ್ರದ ಕುರಿತು ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರ ಬಳಿ ವಿಚಾರಿಸುತ್ತಿದ್ದೆ. ಇನ್ನೂ, ನಾನು ಶಿವರಾಜಕುಮಾರ್ ಹಾಗು ಉಪೇಂದ್ರ ಅವರ ಅಭಿಮಾನಿ. ಈ ಚಿತ್ರ ಮುಗಿದ ಮೇಲೆ ಎಷ್ಟೋ ಜನ ನನ್ನನ್ನು ಕೇಳಿದರು. ಅಂತಹ ದೊಡ್ಡ ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀರಿ. ಏನು ಅನಿಸಿತು? ಎಂದು. ನಾನು ಹೇಳಿದೆ. ನಾನು ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀನಿ ಅಂತ ಅನಿಸಲೇ ಇಲ್ಲ ಎಂದು. ಅವರಿಬ್ಬರೂ ಅಷ್ಟು ಸರಳವಾಗಿದ್ದರು. ಇನ್ನೂ, ನಾವು ಪರಭಾಷಾ ಹಾವಳಿ ಅನ್ನುತ್ತೇವೆ. ನಾವು ಕೂಡ ಹಾವಳಿ ಕೊಡುವ ಚಿತ್ರ ಮಾಡಬೇಕು. ಆ ರೀತಿಯ ಚಿತ್ರ “45” ಆಗಲಿದೆ ಎನ್ನುವ ಭರವಸೆ ನನ್ನಗಿದೆ ಎಂದು ನಟ ರಾಜ್ ಬಿ ಶೆಟ್ಟಿ ತಿಳಿಸಿದರು.


ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ನಿರ್ಮಾಪಕ ರಮೇಶ್ ರೆಡ್ಡಿ, ಡಿಸೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು. ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ ಹಾಗೂ ಸುಧಾರಾಣಿ ಅವರು “45” ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

45 arjun janya movie teaser 45 Kannada movie 45 kannada movie update 45 kannada movie upendra 45 movie 45 movie release date 45 movie songs 45 movie teaser 45 movie trailer kannada 45 movie update 45 official teaser kannada 45 pan india movie 45 telugu movie 45 the movie kannada movie teaser kannada movie trailer Kannada Movies kannada new movie kannada new movies kannda movie updates new kannada movie Raj b Shetty Sandalwood Sandalwood news ಕನ್ನಡ ಸಿನಿಮಾ ಸುದ್ದಿ ರಾಜ್‌ ಬಿ ಶೆಟ್ಟಿ ಶಿವರಾಜ್‌ಕುಮಾರ್‌ ಸ್ಯಾಂಡಲ್‌ವುಡ್‌
Share. Facebook Twitter Pinterest LinkedIn Tumblr Email
Jagali Katte
  • Website

Related Posts

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

February 10, 2026

ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

February 10, 2026

Landlord Review: ದುನಿಯಾ ವಿಜಯ್-‌ ರಾಜ್‌ ಬಿ ಶೆಟ್ಟಿಯ ʻಲ್ಯಾಂಡ್‌ ಲಾರ್ಡ್‌ʼ ಸಿನಿಮಾ ಹೇಗಿದೆ?

January 23, 2026

‘ಕರಾವಳಿ’ಯಿಂದ ಬಂತು ಫಸ್ಟ್ ರೊಮ್ಯಾಂಟಿಕ್ ಮುದ್ದು ಗುಮ್ಮ

January 23, 2026
Add A Comment
Leave A Reply Cancel Reply

Editors Picks
Latest Posts

Subscribe to Updates

Get the latest sports news from SportsSite about soccer, football and tennis.

© 2026 Jagali Katte. Designed by Karnataka Best Digital Services.
  • ಮುಖಪುಟ
  • ಸಿನಿಮಾ
  • ಕಿರುತೆರೆ
  • ಚಿತ್ರವಿಮರ್ಶೆ
  • ಏನ್ ಸುದ್ದಿ
  • ವಿಶೇಷ

Type above and press Enter to search. Press Esc to cancel.