Author: Jagali Katte

ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ‌.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ “ಅಪರಿಚಿತೆ” ಹಾಡೊಂದನ್ನು ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಗೀತಪ್ರಿಯ ಅವರು ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಈ ಸಿನಿಮಾ‌ ಮಾಡಿದ್ದಾರೆ. ನಾವು ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ಕೊಡಬೇಕಾದರೆ, ಅದನ್ನು ಸುಲಭವಾಗಿ ತಲುಪಿಸುವ ಮಾರ್ಗ ಸಿನಿಮಾ. ಅಂತಹ ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಗೀತಪ್ರಿಯ ಸುರೇಶ್ ಕುಮಾರ್ ಮತ್ತು ತಂಡಕ್ಕೆ…

Read More

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರ ಈ ವಾರ ನವೆಂಬರ್ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಏನೆಂಬುದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ “GST” ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ.…

Read More